alex Certify ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ವಕೀಲ ಕೋರ್ಟ್ ಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ವಕೀಲ ಕೋರ್ಟ್ ಗೆ ಶರಣು

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ವಕೀಲ ರಾಜೇಶ್ ಕೋರ್ಟ್ ಗೆ ಶರಣಾಗಿದ್ದಾರೆ. ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಅವರು ಕೋರ್ಟ್ ಗೆ ಶರಣಾಗಿದ್ದಾರೆ

ಮೂರನೇ ಜೆಎಂಎಫ್ಸಿ ಕೋರ್ಟಿಗೆ ಅವರು ಶರಣಾಗಿದ್ದಾರೆ. ಇಂಟರ್ನ್ ಶಿಪ್ ಕಾನೂನು ವಿದ್ಯಾರ್ಥಿನಿಗೆ ವಕೀಲ ರಾಜೇಶ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದರು. ಇದಾದ ನಂತರ ತಲೆಮರೆಸಿಕೊಂಡಿದ್ದ ವಕೀಲ ರಾಜೇಶ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಸುಪ್ರೀಂಕೋರ್ಟಿನಲ್ಲೂ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಇಂದು ಮಂಗಳೂರು ಕೋರ್ಟ್ ಶರಣಾಗಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...