alex Certify ಗುಡ್ ನ್ಯೂಸ್: 2 ತಿಂಗಳು ಟೋಲ್ ಶುಲ್ಕ ವಿನಾಯಿತಿ ನೀಡಿದ ಹೆದ್ದಾರಿ ಪ್ರಾಧಿಕಾರ; ಆಮ್ಲಜನಕ ಟ್ಯಾಂಕರ್ ಗಳಿಗೆ ತಡೆ ಇಲ್ಲದ ಸಂಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: 2 ತಿಂಗಳು ಟೋಲ್ ಶುಲ್ಕ ವಿನಾಯಿತಿ ನೀಡಿದ ಹೆದ್ದಾರಿ ಪ್ರಾಧಿಕಾರ; ಆಮ್ಲಜನಕ ಟ್ಯಾಂಕರ್ ಗಳಿಗೆ ತಡೆ ಇಲ್ಲದ ಸಂಚಾರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರಿಗೆ ಅಗತ್ಯವಾದ ಆಮ್ಲಜನಕ ಪೂರೈಕೆಗಾಗಿ ಮತ್ತೊಂದು ಕ್ರಮಕೈಗೊಳ್ಳಲಾಗಿದ್ದು, ಆಮ್ಲಜನಕ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಬಗ್ಗೆ ಮಾಹಿತಿ ನೀಡಿದ್ದು, ದ್ರವೀಕೃತ ವೈದ್ಯಕೀಯ ಆಮ್ಲಜನಕ ಸಾಗಣೆ ಮಾಡುವ ಟ್ಯಾಂಕರ್ ಗಳಿಗೆ ಹೆದ್ದಾರಿಗಳಲ್ಲಿ ಶುಲ್ಕ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದೆ.

ದೇಶಾದ್ಯಂತ ಕೊರೊನಾ ಸೋಂಕಿತರಿಗಾಗಿ ವೈದ್ಯಕೀಯ ಆಮ್ಲಜನಕಕ್ಕೆ ಭಾರಿ ಬೇಡಿಕೆ ಇರುವ ಕಾರಣ ತುರ್ತು ಸೇವೆ ಎಂದು ಪರಿಗಣಿಸಲಾಗಿದ್ದು, ಎರಡು ತಿಂಗಳ ಕಾಲ ಅಥವಾ ಮುಂದಿನ ಆದೇಶದವರೆಗೆ ಟೋಲ್ ಶುಲ್ಕ ವಿನಾಯಿತಿ ನೀಡಲಾಗಿದೆ. ಆಮ್ಲಜನಕ ಸಾಗಣೆ ಟ್ಯಾಂಕರ್ ಗಳು ತಡೆಯಿಲ್ಲದೆ ಸಂಚರಿಸಲು ಆದ್ಯತೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...