ಕೋವಿಡ್ ನಿಂದ ಮೃತರಾದ ರೈತರ ಒಂದು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡುವುದಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದರು.
ಸರ್ಕಾರದಿಂದ ಸಾಲ ಮನ್ನಾ ಕುರಿತಂತೆ ಅಧಿಕೃತ ಆದೇಶ ಹೊರಡಿಸಿಲ್ಲ. ಸರ್ಕಾರ ಡಿಸಿಸಿ ಬ್ಯಾಂಕುಗಳಿಗೆ ಜವಾಬ್ದಾರಿ ವರ್ಗಾಯಿಸಿದೆ. ಆರ್ಥಿಕವಾಗಿ ಸದೃಢವಾಗಿರುವ ಡಿಸಿಸಿ ಬ್ಯಾಂಕುಗಳು ಸಾಲ ಮನ್ನಾ ಮಾಡಿದ್ದು, ಆರ್ಥಿಕವಾಗಿ ಬಲಿಷ್ಠವಾಗಿಲ್ಲದ ಡಿಸಿಸಿ ಬ್ಯಾಂಕುಗಳು ಮೃತಪಟ್ಟ ರೈತರ ಕುಟುಂಬದವರಿಗೆ ಸಾಲ ಪಾವತಿಸಲು ನೋಟಿಸ್ ನೀಡತೊಡಗಿವೆ ಎನ್ನಲಾಗಿದೆ.
ಕೊರೋನಾ ಎರಡನೇ ಅಲೆ ಸಂದರ್ಭದಲ್ಲಿ ಜುಲೈನಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಕೊರೋನಾದಿಂದ ಮೃತಪಟ್ಟ ರೈತರ ಒಂದು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡುವುದಾಗಿ ತಿಳಿಸಿ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕುಗಳ ಮೂಲಕ ಸಾಲ ಮನ್ನಾ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದರು.
ಆದರೆ, ಆರ್ಥಿಕವಾಗಿ ಬಲಿಷ್ಠವಾಗಿಲ್ಲದ ಡಿಸಿಸಿ ಬ್ಯಾಂಕುಗಳು ಸಾಲ ಪಾವತಿಸಲು ರೈತರ ಕುಟುಂಬದವರಿಗೆ ನೋಟಿಸ್ ನೀಡುತ್ತಿವೆ. ದುಡಿಯುವ ಸದಸ್ಯನ ಕಳೆದುಕೊಂಡ ರೈತ ಕುಟುಂಬದವರು ಸಂಕಷ್ಟದಲ್ಲಿದ್ದು, ಒಂದು ಲಕ್ಷ ರೂಪಾಯಿವರೆಗಿನ ಸಾಲಮನ್ನಾ ಆಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ, ಬಹುತೇಕ ಡಿಸಿಸಿ ಬ್ಯಾಂಕ್ ಆರ್ಥಿಕವಾಗಿ ಸಬಲವಾಗಿಲ್ಲದ ಕಾರಣ ಸುಸ್ತಿಯಾದ ಸಾಲಗಾರರಿಗೆ ಸಹಕಾರ ಸಂಘಗಳ ಮೂಲಕ ಸಾಲ ಪಾವತಿಸುವಂತೆ ನೋಟಿಸ್ ನೀಡಲಾಗುತ್ತಿದೆ. ಇಲ್ಲದಿದ್ದರೆ ಹೆಚ್ಚುವರಿ ಬಡ್ಡಿ ಸಲ ಮರುಪಾವತಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಲಾಗಿದೆ. ಇದರಿಂದಾಗಿ ಕೋವಿಡ್ ನಿಂದ ಮೃತಪಟ್ಟ ರೈತರ ಕುಟುಂಬದವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಸಂಕಷ್ಟದ ಹೊತ್ತಲ್ಲಿ ಸಾಲ ಪಾವತಿಸುವ ಅನಿವಾರ್ಯತೆ ಎದುರಾಗಿದೆ ಎನ್ನಲಾಗಿದೆ.