ಬೆಂಗಳೂರು: ಶುಕ್ರವಾರ ಬೆಂಗಳೂರು ಅರಮನೆ ಮೈದಾನದಲ್ಲಿ ಸಹಕಾರ ಇಲಾಖೆ ಆಯೋಜಿಸಿದ್ದ ಸಹಕಾರ ಮೇಳದಲ್ಲಿ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಅವರು, ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಲಾಂಛನ ಬಿಡುಗಡೆ ಮಾಡಿದ್ದು, ಸೌಹಾರ್ದ ಸಹಕಾರಿ ಸೌಧವನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಹಕಾರ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಹೇಳಿದ್ದಾರೆ. ಹಾಲು ಉತ್ಪಾದಕರಿಗೆ ಕ್ರೆಡಿಟ್ ಕಾರ್ಡ್ ವಿತರಿಸಲು ಉದ್ದೇಶಿಸಿದ್ದು, ಕರ್ನಾಟಕದಿಂದಲೇ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಹೈನುಗಾರರಿಗೆ ಕ್ರೆಡಿಟ್ ಕಾರ್ಡ್ ವಿತರಣೆ, ಸಹಕಾರ ನೀತಿ ಜಾರಿಗೊಳಿಸಲಾಗುತ್ತದೆ. ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮೂಲಕ ಎಲ್ಲಾ ಹಾಲು ಉತ್ಪಾದಕರಿಗೆ ಕ್ರೆಡಿಟ್ ಕಾರ್ಡ್ ವಿತರಿಸಲಾಗುವುದು. ಕೇಂದ್ರ ಸರ್ಕಾರದ ಈ ಯೋಜನೆ ಪ್ರಾಯೋಗಿಕವಾಗಿ ಕರ್ನಾಟಕದಿಂದಲೇ ಆರಂಭವಾಗಲಿದ್ದು ಇದಕ್ಕೆ ಅಗತ್ಯವಾದ ಸಹಾಯ ನೀಡಲಾಗುವುದು ಎಂದು ತಿಳಿಸಿದ್ದಾರೆ.