ಬೆಂಗಳೂರು: ಕೃಷಿ ಇಲಾಖೆಯಿಂದ ರೈತರ ಮನೆ ಬಾಗಿಲಿಗೆ ತಲುಪಿಸಲು ‘ನನ್ನ ಪಾಲಿಸಿ ನನ್ನ ಕೈಲಿ’ ಅಭಿಯಾನ ಆರಂಭಿಸಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ್ ಚಾಲನೆ ನೀಡಿದ್ದಾರೆ. ಪ್ರಕೃತಿ ವಿಕೋಪದಿಂದ ಬೆಳೆ ನಷ್ಟವಾದ ರೈತರಿಗೆ ಯೋಜನೆಯಡಿ ನೆರವು ನೀಡಲಾಗುತ್ತದೆ.
ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಬಿ.ಹೆಚ್.ಎಸ್. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಯನ್ನು ಹೆಚ್ಚಳ ಮಾಡುವ ಜೊತೆಗೆ ಯೋಜನೆಯನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ನನ್ನ ಪಾಲಿಸಿ ನನ್ನ ಕೈಲಿ ಎಂಬ ಬೆಳೆ ವಿಮೆ ಪಾಲಿಸಿ ವಿತರಣೆ ಕಾರ್ಯವನ್ನು ಕೃಷಿ ಇಲಾಖೆ ಆರಂಭಿಸಿದೆ.
ಪ್ರಕೃತಿ ವಿಕೋಪದಿಂದ ಬೆಳೆಗೆ ವಿಮೆ ಭದ್ರತೆ ಒದಗಿಸುವುದು ಸರ್ಕಾರದ ಸಂಕಲ್ಪವಾಗಿದೆ. ಬೆಳೆ ನಷ್ಟವಾದರೆ ರೈತರ ನೆರವಿಗೆ ಬರುವ ಯೋಜನೆ ಇದಾಗಿದ್ದು, ಮನೆಬಾಗಿಲಿಗೆ ಪಾಲಿಸಿ ತಲುಪಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.