ನವದೆಹಲಿ: ಬೆಲೆ ಕುಸಿತ, ಆದಾಯ ಕೊರತೆ ಲಾಕ್ಡೌನ್ ಕಾರಣ ಸಂಕಷ್ಟ ಅನುಭವಿಸಿದ ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತಷ್ಟು ಕೊಡುಗೆ ನೀಡಲಾಗಿದೆ.
ಭರ್ಜರಿ ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಮೂಲಕ ರೈತರ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ಜೋಳ, ರಾಗಿ, ಭತ್ತ, ದ್ವಿದಳ ಧಾನ್ಯ ಸೇರಿದಂತೆ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಶೇಕಡ 50 ರಿಂದ ಶೇಕಡ 84ರಷ್ಟು ಹೆಚ್ಚಳ ಮಾಡಲಾಗಿದೆ.
ಕೃಷಿ ವೆಚ್ಚ ಮತ್ತು ಬೆಲೆ ಆಯೋಗದ ವರದಿಯನ್ನು ಆಧರಿಸಿ ಉತ್ಪಾದನಾ ವೆಚ್ಚಕ್ಕಿಂತ ಒಂದೂವರೆ ಪಟ್ಟು ಅಧಿಕ ಬೆಂಬಲ ಬೆಲೆಯನ್ನು ನಿಗದಿ ಮಾಡಲಾಗಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ.