ಬೆಂಗಳೂರು: ಬೆಳೆ ಸಾಲ ಪಡೆಯುವ ರೈತರಿಗೆ ಕೃಷಿ ವಿಮೆ ಕಡ್ಡಾಯವಲ್ಲ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ. ರೈತರು ಅಧಿಸೂಚಿತ ಬೆಳೆಗಳಿಗೆ ಸಾಲ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೃಷಿ ವಿಮೆ ಯೋಜನೆಗೆ ಒಳಪಡಬೇಕಾದ ಅಗತ್ಯವಿಲ್ಲ ಎಂದು ಹೇಳಲಾಗಿದೆ.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ 2020 -21ರ ಮುಂಗಾರು ಹಂಗಾಮಿಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರು ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆಯುವಾಗ ಕೃಷಿ ವಿಮಾ ಯೋಜನೆಯಡಿ ಕಡ್ಡಾಯವಾಗಿ ಒಳಪಡುವ ಅಗತ್ಯವಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹೇಳಿದ್ದಾರೆ.
ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕಿಂತ 7 ದಿನ ಮೊದಲು ಲಿಖಿತ ಮುಚ್ಚಳಿಕೆ ಪತ್ರ ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲಾಗುವುದು ಎನ್ನಲಾಗಿದೆ.