ಗದಗ: ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ನಿಗದಿತ ಅವಧಿಯಲ್ಲಿ ವಿಮಾ ಕಂತು ಪಾವತಿಸಬೇಕಿದೆ.
ಈರುಳ್ಳಿ ಮತ್ತು ಒಣಮೆಣಸಿನಕಾಯಿ ಬೆಳೆಗೆ ವಿಮೆ ಪಾವತಿಗೆ ಜುಲೈ 31 ಕೊನೆಯ ದಿನವಾಗಿದೆ. ಹಾಗೂ ಮಳೆಯಾಶ್ರಿತ ಈರುಳ್ಳಿ ಮತ್ತು ಒಣಮೆಣಸಿನಕಾಯಿ ಬೆಳೆಗೆ ವಿಮೆ ಪಾವತಿಗೆ ಅಗಸ್ಟ್ 14 ಕೊನೆಯ ದಿನವಾಗಿರುತ್ತದೆ. ಬಜಾಜ್ ಅಲೇಯನ್ಸ್ ಇನ್ಸೂರೆನ್ಸ್ ಕಂಪನಿಯನ್ನು ಗದಗ ಜಿಲ್ಲೆಗೆ ವಿಮೆ ಏಜನ್ಸಿಯಾಗಿ ನೇಮಿಸಿದೆ.
ರೈತರು ಸ್ವಯಂ ದೃಢೀಕರಣ, ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲಾತಿಗಳನ್ನು ವಿಮಾ ಕಂತು ಪಾವತಿ ವೇಳೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಮತ್ತು ತೋಟಗಾರಿಕೆ ಮಾಹಿತಿ, ಸಲಹಾ ಕೇಂದ್ರ ಗದಗಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದೆಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.