ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿಯಾಗಿ ಇಳುವರಿ ಕಡಿಮೆಯಾಗಿದೆ. ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಹೆಚ್ಚು ಕುಂಠಿತವಾಗಲಿದ್ದು, ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಬೆಲೆ ಏರಿಕೆಯಾಗಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ಇನ್ನಷ್ಟು ತಟ್ಟಲಿದೆ.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. 74 32 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆಯಾಗಿ ಸಕಾಲಕ್ಕೆ ಮಳೆಯಾಗದ ಕಾರಣ ಭಾರತ ಬೆಳೆದ ಬೆಳೆಗಳು ಹಸಿರಾಗಿದ್ದರೂ ಕಾಳು ಕಟ್ಟಿಲ್ಲ.
ಮೆಕ್ಕೆಜೋಳ, ರಾಗಿ, ಭತ್ತ ಸೇರಿ 43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿ ರಾಜ್ಯದ ಆಹಾರ ಧಾನ್ಯಗಳ ಇಳುವರಿಯಲ್ಲಿ ಭಾರಿ ಕುಂಠಿತವಾಗಿದೆ. ಇದರ ಪರಿಣಾಮ ಆಹಾರ ಧಾನ್ಯಗಳ ಬೆಲೆ ಏರಿಕೆಯಾಗಿ ಬಿಸಿ ತಟ್ಟಲಿದೆ.