ರಾಯಚೂರು: ಅಡುಗೆ ಅನಿಲದ ಸಿಲಿಂಡರ್ ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಕೋರಲಾಗಿದೆ.
ಗ್ಯಾಸ್ ಏಜೆನ್ಸಿಗಳು ಗೃಹ ಬಳಿಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡುವುದು ಗ್ಯಾಸ್ ಏಜೆನ್ಸಿಗಳ ಜವಾಬ್ದಾರಿ. ಆದ್ದರಿಂದ ಯಾವುದೇ ಕಾರಣಕ್ಕೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕರ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡುವಂತಿಲ್ಲ,
ಸಿಲಿಂಡರ್ ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಸಾರ್ವಜನಿಕರಲ್ಲಿ ಬಿಲ್ ನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದ್ದಲ್ಲಿ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಗೆ ಹಾಗೂ ದೂರವಾಣಿ ಸಂಖ್ಯೆ 08532-231678 ಅಥವಾ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ತಿಳಿಸಿದ್ದಾರೆ.