ನವದೆಹಲಿ: ಲಾಕ್ ಡೌನ್ ನಿಂದಾಗಿಯಿಂದ ಸಂಕಷ್ಟದಲ್ಲಿರುವ ಜನರಿಗೆ ಖುಷಿ ಸುದ್ದಿ ಇಲ್ಲಿದೆ. ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ದರವನ್ನು 162.50 ರೂ. ಇಳಿಕೆ ಮಾಡಲಾಗಿದೆ.
ಇದರೊಂದಿಗೆ ಸಬ್ಸಿಡಿ ರಹಿತ ಸಿಲಿಂಡರ್ ದರ ದೆಹಲಿಯಲ್ಲಿ 162.50 ರೂಪಾಯಿಗಳಷ್ಟು ಕಡಿಮೆಯಾಗಿದ್ದು 581.50 ರೂ.ಗೆ ಸಿಗಲಿದೆ. ಅದೇ ರೀತಿ ಬೆಂಗಳೂರಿನಲ್ಲಿ 159 ರೂಪಾಯಿ ಕಡಿಮೆಯಾಗಲಿದ್ದು 585 ರೂಪಾಯಿಗೆ ಸಬ್ಸಿಡಿ ರಹಿತ ಸಿಲಿಂಡರ್ ಸಿಗಲಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ತೈಲದ ಬೆಲೆ ಕಳೆದ ಎರಡು ದಶಕದ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಜಾಗತಿಕ ಮಾರುಕಟ್ಟೆಯ ಪರಿಣಾಮ ದೇಶೀಯ ಮಾರುಕಟ್ಟೆಯ ಮೇಲೆಯೂ ಆಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ದರ ಇಳಿಕೆ ಮಾಡಲಾಗಿದ್ದು, ಸತತ ಮೂರನೇ ತಿಂಗಳು ಬೆಲೆ ಇಳಿಕೆಯಾಗಿದೆ.