alex Certify BIG BREAKING: ಅಪಘಾತದಲ್ಲಿ ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಪಘಾತದಲ್ಲಿ ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ದುರ್ಮರಣ

ಮುಂಬೈನ ಕೈಗಾರಿಕೋದ್ಯಮಿ, ಟಾಟಾ ಗ್ರೂಪ್‌ ಮಾಜಿ ಅಧ್ಯಕ್ಷದ್ದ ಸೈರಸ್ ಮಿಸ್ತ್ರಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಟಾಟಾ ಸಮೂಹದ ಸೈರಸ್ ಮಿಸ್ತ್ರಿ ಆಕಸ್ಮಿಕ ಅಪಘಾತದಲ್ಲಿ ಸಾವು ಕಂಡಿದ್ದಾರೆ ಎಂದು ಪಾಲ್ಘರ್ ಜಿಲ್ಲಾ ಪೊಲೀಸ್ ಅಧೀಕ್ಷಕ ಮಾಹಿತಿ ನೀಡಿದ್ದಾರೆ.

ಮುಂಬೈ -ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿಯ ಚರೋತಿ ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮಿಸ್ತ್ರಿ ತಮ್ಮ ಮರ್ಸಿಡಿಸ್ ಕಾರಿನಲ್ಲಿ ಗುಜರಾತ್‌ನಿಂದ ಮುಂಬೈಗೆ ಹಿಂತಿರುಗುತ್ತಿದ್ದರು. ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ತಮ್ಮ ಮರ್ಸಿಡಿಸ್ ಕಾರ್ ನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಹಿಂದಿರುಗುತ್ತಿದ್ದಾಗ ಭಾನುವಾರ ಪಾಲ್ಘರ್‌ನ ಚರೋತಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಸೂರ್ಯ ನದಿಯ ಸೇತುವೆಯ ಮೇಲೆ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ ಗಾಯಗೊಂಡ ಮತ್ತಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಪಾಲ್ಘರ್ ಎಸ್ಪಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...