ನವದೆಹಲಿ: ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ವಾಹನಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ವತಿಯಿಂದ ತೆರಿಗೆ ವಿನಾಯಿತಿ ಘೋಷಣೆ ಮಾಡಲಾಗಿದೆ.
ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ತಿಳಿಸಿದ್ದಾರೆ.
ಸರ್ಕಾರದ ವಾಹನ ನೀತಿ ಅನ್ವಯ ತೆರಿಗೆ ವಿನಾಯಿತಿ ತೀರ್ಮಾನ ಕೈಗೊಳ್ಳಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರು, ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿ ಅಧಿಸೂಚನೆ ಹೊರಡಿಸಿದ್ದಾರೆ ಎಂದು ಹೇಳಿದ್ದಾರೆ.
ಎಲೆಕ್ಟ್ರಿಕ್ ವಾಹನ ನೀತಿ ಘೋಷಣೆ ಮಾಡುವ ಸಂದರ್ಭದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈ ಕುರಿತಂತೆ ಭರವಸೆ ನೀಡಿದ್ದರು. ಅವರು ಈಗ ಬ್ಯಾಟರಿ ಚಾಲಿತ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡುವ ಮೂಲಕ ತಮ್ಮ ಭರವಸೆಯನ್ನು ಈಡೇರಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.