ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳೊಂದಿಗೆ ಬದಲಾಯಿಸುವ ಪ್ರಕ್ರಿಯೆ ಪ್ರಾರಂಭಿಸಿದೆ ಎಂದು ದೆಹಲಿ ಸರ್ಕಾರ ಹೇಳಿದೆ.
ಹಿರಿಯ ಜಿಎಡಿ ಅಧಿಕಾರಿಯೊಬ್ಬರು, ನಾವು ಅಂತಹ ವಾಹನಗಳನ್ನು ಗುರುತಿಸುವ ಮತ್ತು ಬದಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ, ಹಳೆ ವಾಹನಗಳಳ ಸ್ಕ್ರ್ಯಾಪಿಂಗ್ ಸಮಯ ಬಂದಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ(NGT) ಆದೇಶದ ಪ್ರಕಾರ, ದೆಹಲಿಯಲ್ಲಿ ಕ್ರಮವಾಗಿ 10 ವರ್ಷ ಮತ್ತು 15 ವರ್ಷಕ್ಕಿಂತ ಹಳೆಯದಾದ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಬಳಕೆ ನಿಷೇಧಿಸಲಾಗಿದೆ.
ಆಗಸ್ಟ್ 2020 ರಲ್ಲಿ ಎಲೆಕ್ಟ್ರಿಕ್ ವಾಹನ ನೀತಿಯನ್ನು ಪರಿಚಯಿಸಿದ ನಂತರ, ದೆಹಲಿ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸ್ವಾಯತ್ತ ಸಂಸ್ಥೆಗಳು ತಮ್ಮ ಫ್ಲೀಟ್‌ನಲ್ಲಿ ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳೊಂದಿಗೆ ಬದಲಾಯಿಸಲು ಪ್ರಾರಂಭಿಸಿವೆ.
ಕಳೆದ ವರ್ಷ ಫೆಬ್ರವರಿಯಲ್ಲಿ, ದೆಹಲಿ ಸರ್ಕಾರ ತನ್ನ ಎಲ್ಲಾ ಇಲಾಖೆಗಳು ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ತನ್ನ ಫ್ಲೀಟ್‌ಗೆ ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ಬಾಡಿಗೆಗೆ ಅಥವಾ ಖರೀದಿಸಲು ನಿರ್ದೇಶಿಸಿತ್ತು.
ದೆಹಲಿ ಸರ್ಕಾರದ ಎಲ್ಲಾ ಇಲಾಖೆಗಳು ಇನ್ನು ಮುಂದೆ ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ಬಳಸಲಿವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. 2,000 ಕ್ಕೂ ಹೆಚ್ಚು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಿಂದ ಬದಲಾಯಿಸಲಾಗುತ್ತದೆ.
ಹಳೆಯ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ಎಲೆಕ್ಟ್ರಿಕ್ ಕಿಟ್‌ಗಳೊಂದಿಗೆ ಇ-ವಾಹನಗಳಾಗಿ ಪರಿವರ್ತಿಸುವ ಕೇಂದ್ರಗಳ ನೋಂದಣಿ ಪ್ರಕ್ರಿಯೆಯನ್ನು ಸರ್ಕಾರ ಈ ತಿಂಗಳ ಆರಂಭದಲ್ಲಿ ಪ್ರಾರಂಭಿಸಿತ್ತು. ಅಧಿಕಾರಿಗಳ ಪ್ರಕಾರ, ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಎಲೆಕ್ಟ್ರಿಕ್ ಕಿಟ್‌ಗಳ 10 ತಯಾರಕರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ.