ನವದೆಹಲಿ: ಡಿಜಿಟಲ್ ಮಾಧ್ಯಮ, ಒಟಿಟಿ ನಿಯಂತ್ರಣಕ್ಕೆ ಶೀಘ್ರವೇ ಹೊಸ ಕಾನೂನು ರೂಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಡಿಜಿಟಲ್ ಮಾಧ್ಯಮಗಳಿಗೆ ಸಮಾನ ವೇದಿಕೆ ಕಲ್ಪಿಸುವ ಉದ್ದೇಶದೊಂದಿಗೆ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ ಡಿಜಿಟಲ್ ಮಾಧ್ಯಮಗಳು ಒಟಿಟಿ ಸ್ವಯಂ ನಿಯಂತ್ರಣಕ್ಕೆ ಹೊಸ ಕಾನೂನು ರಚನೆಗೆ ತಿರ್ಮಾನಿಸಿದೆ.
ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮ, ಕೇಬಲ್ ಟಿವಿ ವಲಯಕ್ಕೆ ಇರುವ ರೀತಿಯಲ್ಲೇ ಡಿಜಿಟಲ್ ಮಾಧ್ಯಮಗಳ ನಿಯಂತ್ರಣಕ್ಕಾಗಿ ಹೊಸ ಕಾನೂನು ರಚಿಸಲಾಗುವುದು. ಯಾವುದೇ ನಿಯಂತ್ರಣಕ್ಕೆ ಒಳಪಡದ ಡಿಜಿಟಲ್ ಮಾಧ್ಯಮಗಳಿಂದ ಭಾರಿ ಪ್ರಮಾಣದಲ್ಲಿ ಸ್ವಾತಂತ್ರ್ಯ ದುರುಪಯೋಗವಾಗುತ್ತಿದೆ. ಸುಳ್ಳುಸುದ್ದಿ ಹಬ್ಬಿಸುವುದು, ಮಾನಹಾನಿ, ಸ್ವೇಚ್ಛಾಚಾರಕ್ಕೆ ಕಾರಣವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇವುಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ನಿರ್ಧರಿಸಿದ್ದು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.