alex Certify ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್: ಸತತ 3 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್: ಸತತ 3 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ. ಭಾನುವಾರ ಪೆಟ್ರೋಲ್ ಪ್ರತಿ ಲೀಟರ್ ಗೆ 8 ಪೈಸೆ, ಡೀಸೆಲ್ ಪ್ರತಿ ಲೀಟರ್ ಗೆ 19 ಪೈಸೆಯಷ್ಟು ಏರಿಕೆಯಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಎರಡು ತಿಂಗಳ ನಂತರ ತೈಲ ದರ ಪರಿಷ್ಕರಣೆಯಾದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿಯೂ ದೈನಂದಿನ ದರ ಪರಿಷ್ಕರಣೆ ನಡೆದಿದ್ದು, ಸತತ ಮೂರನೇ ದಿನವೂ ದರ ಹೆಚ್ಚಳವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 81.46 ರೂ., ಡೀಸೆಲ್ ಗೆ 81.38 ರೂಪಾಯಿ ಇದೆ. ಮೂರು ದಿನದ ಅವಧಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 40 ಪೈಸೆ, ಡೀಸೆಲ್ ಪ್ರತಿ ಲೀಟರಿಗೆ 61 ಪೈಸೆಯಷ್ಟು ಹೆಚ್ಚಳವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...