ನವದೆಹಲಿ: ದೇಶದಲ್ಲಿ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಥರ್ಮಲ್ ಪವರ್ ಪ್ಲಾಂಟ್ ಗಳಿಗೆ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ. ವಿದ್ಯುತ್ ಉತ್ಪಾದನಾ ಘಟಕಗಳಿಗೆ ಬೇಕಾಗುವಷ್ಟು ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ. ಇನ್ನೂ 24 ದಿನಕ್ಕೆ ಪೂರೈಕೆಯಾಗುವಷ್ಟು ಕಲ್ಲಿದ್ದಲು ಸಂಗ್ರಹವಿದೆ ಎಂದು ತಿಳಿಸಿದ್ದಾರೆ.
ವಿದ್ಯುತ್ ಅಭಾವ ಎದುರಾಗುವುದಿಲ್ಲ. ಕಲ್ಲಿದ್ದಲು ಉತ್ಪಾದನೆ ಕುರಿತು ಪರಿಶೀಲನೆ ನಡೆಸಲಾಗಿದೆ. ದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ಆತಂಕ ಬೇಡ ಎಂದು ಅವರು ಹೇಳಿದ್ದಾರೆ.