
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಮೇ 22 ರವರೆಗೆ ರೈತರು ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ.
ಇದುವರೆಗೆ ಕಿಸಾನ್ ಸಮ್ಮಾನ್ ಪೋರ್ಟಲ್ ಮೂಲಕ ನಡೆಸಲಾಗುತ್ತಿದ್ದ ಇ -ಕೆವೈಸಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ರೈತರು ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ತೆರಳಿ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇ-ಕೆವೈಸಿ ಮಾಡಿಸದ ರೈತರ ಖಾತೆಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣ ವರ್ಗಾವಣೆಯಾಗುವುದಿಲ್ಲ.
ಆಧಾರ್ ಓಟಿಪಿ ಮೂಲಕ ಇ -ಕೆವೈಸಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಯೋಮೆಟ್ರಿಕ್ ವಿವರ ನೀಡಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ.