ಧಾರವಾಡ: ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ.
ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in ವೆಬ್ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.
ಇ-ಕೆವೈಸಿ ಮಾಡಿಕೊಳ್ಳುವ ವಿಧಾನ:
ಇ-ಕೆವೈಸಿ ಓಟಿಪಿ ಮುಖಾಂತರ ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.gov.in ವೆಬ್ಸೈಟ್ನಲ್ಲಿ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕ್ಕಿಸಿ ಆಧಾರ್ ನಂಬರ್ ಹಾಗೂ ಕ್ಯಾಪ್ಚಾ ನಮೂದಿಸಿ ತದನಂತರ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.
ಇ-ಕೆವೈಸಿ ಬಯೋಮೆಟ್ರಿಕ್ ಮೂಲಕ ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. ಈ ಪ್ರಕ್ರಿಯೆಗಾಗಿ ಸಿಎಸ್ಸಿ ಕೇಂದ್ರದವರು ಎಲ್ಲ ಟ್ಯಾಕ್ಸ ಒಳಗೊಂಡಂತೆ, 15 ರೂ. ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರನ್ನು ಭೇಟಿ ನೀಡಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.