alex Certify ‘ಆಧಾರ್’ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಧಾರ್’ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಆಧಾರ್ ಕಾರ್ಡ್ ನೀಡಿದರೆ 10 ನಿಮಿಷದಲ್ಲೇ ಇ -ಪಾನ್ ಕಾರ್ಡ್ ಸೌಲಭ್ಯ ಕಲ್ಪಿಸುವ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೇವಲ 10 ನಿಮಿಷದ ಅವಧಿಯಲ್ಲಿ ಇ -ಪಾನ್ ಕಾರ್ಡ್ ನಂಬರ್ ಒದಗಿಸುವ ಯೋಜನೆಗೆ ಚಾಲನೆ ನೀಡಿದ್ದಾರೆ.

ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಸೂಕ್ತವಾದ ಆಧಾರ್ ಕಾರ್ಡ್ ಹೊಂದಿದ ವ್ಯಕ್ತಿಗಳು ಸೌಲಭ್ಯ ಪಡೆಯಬಹುದು. ಇದು ಆಧಾರ್ ಆಧರಿತ ಇ-ಕೆವೈಸಿ ರೂಪದಲ್ಲಿ ನಿರ್ವಹಣೆಯಾಗಲಿದೆ. ಇದು ಸಂಪೂರ್ಣ ಉಚಿತವಾಗಿರುತ್ತದೆ. ಕಳೆದ ವರ್ಷದ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದ್ದ ಯೋಜನೆ ಈಗಾಗಲೇ ಪ್ರಾಯೋಗಿಕ ರೂಪದಲ್ಲಿ ಜಾರಿಯಲ್ಲಿದ್ದು, ಈಗಾಗಲೇ 6.77 ಲಕ್ಷ ಜನರಿಗೆ ಇ -ಪಾನ್ ಕಾರ್ಡ್ ನಂಬರ್ ವಿತರಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...