alex Certify ಅಡುಗೆ ಕೆಲಸಗಾರರು, ಅರ್ಚಕರು, ಪುರೋಹಿತರು ಸೇರಿ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡುಗೆ ಕೆಲಸಗಾರರು, ಅರ್ಚಕರು, ಪುರೋಹಿತರು ಸೇರಿ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್

ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕರ ಅನುಕೂಲಕ್ಕಾಗಿ ಸೌಲಭ್ಯ ಕಲ್ಪಿಸಲು ಮುಂದಾಗಿದ್ದು, ಇ -ಶ್ರಮ್ ವೆಬ್ಸೈಟ್ ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ.

ಇ – ಶ್ರಮ ಹೆಸರಿನ ವೆಬ್ ಪೋರ್ಟಲ್ ನಲ್ಲಿ ನಿರ್ದಿಷ್ಟ ವಲಯದ ಕಾರ್ಮಿಕರು ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದರಲ್ಲಿ ಅಡುಗೆ ಕೆಲಸಗಾರರು, ಪುರೋಹಿತರು ಮತ್ತು ಅರ್ಚಕರು ಕೂಡ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಆಗಸ್ಟ್ 26 ರಂದು ಇ –ಶ್ರಮ ವೆಬ್ ಸೈಟ್ ಗೆ ಚಾಲನೆ ನೀಡಲಾಗಿದ್ದು, ಇದಾದ ಎರಡು ದಿನಗಳ ನಂತರ ಪುರೋಹಿತರು, ಅರ್ಚಕರು, ಅಡುಗೆ ಕೆಲಸಗಾರರಿಗೆ ಕೂಡ ಪೋರ್ಟಲ್ ನಲ್ಲಿ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇ -ಶ್ರಮ ವೆಬ್ಸೈಟ್ ನಲ್ಲಿ ನೋಂದಾಯಿಸಿಕೊಂಡವರ ವಿವರಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಇ -ಶ್ರಮಿಕ ಕಾರ್ಡ್ ವಿತರಿಸಲಾಗುತ್ತದೆ. ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಮಾಹಿತಿ ಮತ್ತು ನೋಂದಣಿಗೆ http://eshram.gov.in ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...