
ಬೆಂಗಳೂರು: ನಕಲಿ ಇ –ವೇ ಬಿಲ್ ಬಳಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ರಾಜ್ಯದ ತೆರಿಗೆ ಸಂಗ್ರಹದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಇ -ವೇ ಬಿಲ್ ಗಳನ್ನು ದುರ್ಬಳಕೆ ಮಾಡಿಕೊಳ್ಳುವುದರ ಬಗ್ಗೆ ಮತ್ತು ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವ ಜೊತೆಗೆ ಇಂತಹ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಲು ತಿಳಿಸಿದ್ದಾರೆ.
ಸರಕು ಸಾಗಾಣಿಕೆಗೆ ನೀಡುವ ಸಮಯದ ದುರ್ಬಳಕೆ, ನಕಲಿ ಇ –ವೇ ಬಿಲ್ ಬಳಕೆ ಮೊದಲಾದ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.