ನವದೆಹಲಿ: ರೈಲು ನಿಲ್ದಾಣಗಳಲ್ಲಿ ಇನ್ನು ಮುಂದೆ ಪ್ರಯಾಣಿಕರಿಗೆ ಪ್ಲಾಸ್ಟಿಕ್ ಬದಲು ಮಣ್ಣಿನ ಲೋಟಗಳಲ್ಲಿ ಚಹಾ ನೀಡಲಾಗುತ್ತದೆ.
ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನದ ಅಂಗವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಪ್ಲಾಸ್ಟಿಕ್ ಬದಲು ಮಣ್ಣಿನ ಕುಡಿಕೆಗಳಲ್ಲಿ ಚಹಾ ಕೊಡಲಾಗುವುದು ಎಂದು ರೈಲ್ವೆ ಸಚಿವ ಪಿಯುಷ್ ಗೋಯಲ್ ಹೇಳಿದ್ದಾರೆ.
ದೇಶದ 400 ರೈಲು ನಿಲ್ದಾಣಗಳಲ್ಲಿ ಮಣ್ಣಿನ ಲೋಟದಲ್ಲಿ ಚಹಾ ನೀಡುವ ಪದ್ಧತಿ ಈಗಾಗಲೇ ಜಾರಿಯಲ್ಲಿದ್ದು, ಉಳಿದ ನಿಲ್ದಾಣಗಳಲ್ಲಿ ಇದನ್ನು ವಿಸ್ತರಿಸಲಾಗುವುದು. ಗುಡಿ ಕೈಗಾರಿಕೆ ಅವಲಂಬಿಸಿದ ಲಕ್ಷಾಂತರ ಮಂದಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.