ಬೆಳಗಾವಿ(ಸುವರ್ಣಸೌಧ): ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಭರವಸೆ ನೀಡಲಾಗಿದೆ.
ವಿಧಾನಸಭೆಯಲ್ಲಿ ಎಲೆಕ್ಟ್ರಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ ಕರ್ನಾಟಕ ಮೋಟಾರ್ ವಾಹನಗಳ ತೆರಿಗೆ ನಿರ್ಧಾರಣೆ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧೇಯಕ ಮಂಡಿಸಿದ್ದಾರೆ. ಪ್ರತಿಪಕ್ಷದ ಸದಸ್ಯರು ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸಬಾರದು, ಸಬ್ಸಿಡಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಕೂಡ ಇದನ್ನು ಬೆಂಬಲಿಸಿ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸಿದಂತೆ ಸಲಹೆ ನೀಡಿದ್ದು, ಸಚಿವ ರಾಮಲಿಂಗಾರೆಡ್ಡಿ, ತಿದ್ದುಪಡಿ ಮಾಡುವುದಾಗಿ ಭರವಸೆ ನೀಡಿದರು. ಬಳಿಕ ವಿಧೇಯಕ ಅಂಗೀಕಾರ ಪಡೆದುಕೊಂಡಿದೆ.