ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಬಹುತೇಕ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಮೊರೆಹೋಗುತ್ತಿದ್ದಾರೆ.
ಮಾರುಕಟ್ಟೆಗೆ ಈಗಂತೂ ಹೆಚ್ಚಿನ ಪ್ರಮಾಣದಲ್ಲಿ ಎಲೆಕ್ಟ್ರಿಕ್ ವಾಹನಗಳು ಬರುತ್ತಿವೆ. ವಿದ್ಯುತ್ ಚಾಲಿತ ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದ್ದು, ರಾಜ್ಯಾದ್ಯಂತ ಎಲೆಕ್ಟ್ರಿಕ್ ರಿಚಾರ್ಜ್ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.
ಇಂಧನ ಸಚಿವ ವಿ. ಸುನಿಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಎಲೆಕ್ಟ್ರಿಕ್ ರಿಚಾರ್ಜ್ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ಪ್ರವಾಸಿ ಸ್ಥಳಗಳಲ್ಲಿ ಎಲೆಕ್ಟ್ರಿಕ್ ವಾಹನ ರಿಚಾರ್ಜ್ ಕೇಂದ್ರ ಆರಂಭಿಸಲು ಎಸ್ಕಾಂಗಳಿಗೆ ಗುರಿ ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.