
ಬೆಂಗಳೂರು: ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬೆಸ್ಕಾಂ ಶಾಕ್ ನೀಡಿದೆ. ವಿದ್ಯುತ್ ಬಿಲ್ ಕಟ್ಟದೇ ವಿಳಂಬ ಮಾಡಿದರೆ ಲೈಸೆನ್ಸ್ ರದ್ದು ಮಾಡಲಾಗುವುದು.
ನಿಮ್ಮ ಮನೆಯ ವಿದ್ಯುತ್ ಸಂಪರ್ಕದ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ವಿದ್ಯುತ್ ಬಾಕಿ ಬಿಲ್ ಸಂಗ್ರಹಕ್ಕೆ ಬೆಸ್ಕಾಂ ಹೊಸ ಬ್ರಹ್ಮಾಸ್ತ್ರ ಪ್ರಯೋಗಿಸಲು ಬೆಸ್ಕಾಂ ಮುಂದಾಗಿದೆ. ವಿದ್ಯುತ್ ಬಾಕಿ ಉಳಿಸಿಕೊಂಡಿದ್ದರೆ ಮೂರು ತಿಂಗಳ ಒಳಗೆ ಪಾವತಿಸಬೇಕು. ಇಲ್ಲದಿದ್ದರೆ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಹೇಳಲಾಗಿದೆ.