ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ.
ಈ ಮೂಲಕ ಬೇಸಿಗೆಗೂ ಮೊದಲೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಿಲಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿ 50 ಪೈಸೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ದರ ಹೆಚ್ಚಳ ಮಾಡುವಂತೆ ಕೆ.ಇ.ಆರ್.ಸಿ.ಗೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಈಗಾಗಲೇ ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ದಿನಸಿ, ತರಕಾರಿ, ಅಡುಗೆ ಅನಿಲ ದರ ಗಗನಕ್ಕೇರಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಈಗ ವಿದ್ಯುತ್ ದರ ಕೂಡ ಹೆಚ್ಚಳವಾಗಲಿದ್ದು, ಸಂಕಷ್ಟದಲ್ಲಿರುವ ಬಡವರು, ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ ಎಂದು ಹೇಳಲಾಗಿದೆ.