ಬೆಂಗಳೂರು: ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಮಂಡಳಿ(KERC) ವಾರ್ಷಿಕ ವಿದ್ಯುತ್ ದರ ಪರಿಷ್ಕರಣೆಗೆ ಮುಂದಾಗಿದ್ದು, ಫೆಬ್ರವರಿಯಲ್ಲಿ ಅದಾಲತ್ ನಿಗದಿಪಡಿಸಿದೆ.
ಬೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಮೊದಲಾದ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿದ್ಯುತ್ ದರ ಹೆಚ್ಚಳದ ಕುರಿತಾಗಿ ಶೀಘ್ರವೇ ಪ್ರಸ್ತಾವನೆ ಸಲ್ಲಿಕೆಯಾಗಲಿದೆ. ನಂತರ ಕೆಇಆರ್‌ಸಿ ಕ್ರಮ ಕೈಗೊಳ್ಳಲಿದೆ. ಎಸ್ಕಾಂಗಳಿಂದ ಸಲ್ಲಿಸಿದ ಬೇಡಿಕೆ ಆಧರಿಸಿ ಕೆಇಆರ್‌ಸಿ ಅಧ್ಯಕ್ಷ ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅದಾಲತ್ ನಡೆಸಲಾಗುವುದು.
ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಅದಾಲತ್ ನಡೆಸಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗುವುದು. ಆದರೆ, ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಂಭವ ಇರುವುದರಿಂದ ವಿದ್ಯುತ್ ದರ ಪರಿಷ್ಕರಣೆಗೆ ಜಾರಿಗೆ ಹಿನ್ನಡೆಯಾಗಬಹುದು. ಒಂದು ವೇಳೆ ಚುನಾವಣೆ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದಲ್ಲಿ ವಿದ್ಯುತ್ ದರ ಪರಿಷ್ಕರಣೆ ಪ್ರಕ್ರಿಯೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.