ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಲಿದೆ. ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ 19 ರಿಂದ 31 ಪೈಸೆಯಷ್ಟು ಹೆಚ್ಚಳವಾಗಲಿದೆ.
ಕಳೆದ ಎರಡು ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿದ್ದವು. ಎಸ್ಕಾಂಗಳ ಮನವಿ ಮೇರೆಗೆ ಕೆ.ಇ.ಆರ್.ಸಿ. ದರ ಏರಿಕೆ ಮಾಡಿದ್ದು, ಇಂದಿನಿಂದ ವಿದ್ಯುತ್ ದರ ಏರಿಕೆಯಾಗಲಿದೆ ಎಂದು ಹೇಳಲಾಗಿದೆ.