ಕೊರೊನಾದಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ವಿದ್ಯುತ್ ದರ ಏರಿಕೆ ಮಾಡಲು ಎಸ್ಕಾಂಗಳು ತಯಾರಿ ನಡೆಸಿವೆ.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯ ಮೆಸ್ಕಾಂ ಪ್ರತಿ ಯುನಿಟ್ ಗೆ 1.33 ರೂಪಾಯಿ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಆದಾಯ ಕೊರತೆ, ನಷ್ಟ, ನಿರ್ವಹಣೆ ವೆಚ್ಚ ಮೊದಲಾದ ಕಾರಣದಿಂದ ವಿದ್ಯುತ್ ದರ ಹೆಚ್ಚಳಕ್ಕೆ ಎಸ್ಕಾಂಗಳು ಮುಂದಾಗಿದ್ದು, ಕೆ.ಇ.ಆರ್.ಸಿ.ಗೆ ಪ್ರಸ್ತಾವನೆ ಸಲ್ಲಿಸಿವೆ. ಇದೇ ವೇಳೆ ಜನ ಸಂಕಷ್ಟದಲ್ಲಿರುವುದರಿಂದ ವಿದ್ಯುತ್ ದರ ಹೆಚ್ಚಳ ಮಾಡದೆ ಇಳಿಕೆ ಮಾಡಬೇಕೆಂಬ ಒತ್ತಾಯವೂ ಕೇಳಿಬಂದಿದೆ.