ಬೆಂಗಳೂರು: ಕಳೆದ ಒಂದು ವರ್ಷದ ಅವಧಿಯಲ್ಲಿ ಮೂರು ಸಲ ವಿದ್ಯುತ್ ದರ ಹೆಚ್ಚಳ ಮಾಡಲಾಗಿದ್ದು, ಈಗ ಮತ್ತೆ ಪ್ರತಿ ಯುನಿಟ್ ಗೆ 1.5 ರೂಪಾಯಿ ಏರಿಕೆ ಮಾಡಲು ಎಸ್ಕಾಂಗಳು ಪ್ರಸ್ತಾವನೆ ಸಿದ್ಧಪಡಿಸಿದ್ದು, ಕೆಇಆರ್ಸಿ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ.
ಕಳೆದ ಒಂದೂವರೆ ವರ್ಷದಲ್ಲಿ ವಿದ್ಯುತ್ ದರ ಮೂರು ಸಲ ಏರಿಕೆಯಾಗಿದ್ದು, 78 ಪೈಸೆಯಷ್ಟು ಹೆಚ್ಚಳವಾಗಿದೆ. ಈಗ ನಾಲ್ಕನೇ ಬಾರಿಗೆ ದರ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಸ್ಕಾಂ, ಮೆಸ್ಕಾಂ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಸರಾಸರಿ ಪ್ರತಿ ಯುನಿಟ್ ಗೆ 1 ರೂ.ನಿಂದ 1.50 ರೂಪಾಯಿವರೆಗೆ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲು ಮುಂದಾಗಿವೆ ಎನ್ನಲಾಗಿದೆ.
ಕಂಪನಿಗಳು ನಷ್ಟದಲ್ಲಿರುವುದರಿಂದ ದರ ಏರಿಕೆ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ.