alex Certify ಪಿಎಫ್ ಉದ್ಯೋಗಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಫ್ ಉದ್ಯೋಗಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಾಗಿದ್ದರಿಂದ ಬಹುತೇಕ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡು ಉದ್ಯೋಗಿ ಹಾಗೂ ಉದ್ಯೋಗದಾತ ಇಬ್ಬರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಪಿಎಫ್ ಕುರಿತು ಕೇಂದ್ರ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಉದ್ಯೋಗಿಗಳು ತಮ್ಮ ಪಿಎಫ್ ಕೊಡುಗೆಯನ್ನು ಶೇಕಡಾ 10 ಕ್ಕಿಂತ ಹೆಚ್ಚು ಮಾಡಬಹುದಾದರೂ ಉದ್ಯೋಗದಾತರು ಶೇ.10 ಕ್ಕಿಂತ ಹೆಚ್ಚು ನೀಡುವ ಅಗತ್ಯವಿಲ್ಲ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ತಿಳಿಸಿದೆ.

ಉದ್ಯೋಗದಾತರು ಕೂಡಾ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಕೇಂದ್ರ ಕಾರ್ಮಿಕ ಸಚಿವಾಲಯ ಇಂತಹುದೊಂದು ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ ನಿಯಮ ಮುಂದಿನ ಮೂರು ತಿಂಗಳವರೆಗೆ ಅಂದರೆ ಜೂನ್, ಜುಲೈ ಮತ್ತು ಆಗಸ್ಟ್ ವರೆಗೆ ಅನ್ವಯಿಸಲಿದೆ ಎಂದು ತಿಳಿಸಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಉದ್ಯೋಗಿ ಹಾಗೂ ಉದ್ಯೋಗದಾತರ‌ ಪಿಎಫ್‌ ಕೊಡುಗೆಯನ್ನು ಶೇ.12 ರಿಂದ  ಶೇ.10 ಕ್ಕೆ ಮೂರು ತಿಂಗಳ ಕಾಲ ಇಳಿಕೆ ಮಾಡಿದ್ದು, ಈ ಹಿನ್ನಲೆಯಲ್ಲಿ ಕಾರ್ಮಿಕ ಸಚಿವಾಲಯ ಈ ತೀರ್ಮಾನ ಕೈಗೊಂಡಿದೆ. ಉದ್ಯೋಗಿ ಬೇಕಾದರೆ ತನ್ನ ಕೊಡುಗೆಯನ್ನು ಹೆಚ್ಚಿಸಬಹುದಾದರೂ ಉದ್ಯೋಗದಾತ ತನ್ನ ಪಾಲಿನ ಶೇ.10 ನೀಡಿದರೆ ಸಾಕು ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...