alex Certify ಪಿಎಫ್ ಬಡ್ಡಿ ದರ ಬಗ್ಗೆ ಉದ್ಯೋಗಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಫ್ ಬಡ್ಡಿ ದರ ಬಗ್ಗೆ ಉದ್ಯೋಗಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: 2021 -22 ನೇ ಸಾಲಿನ EPFO ಖಾತೆಗಳ ಠೇವಣಿಗಳ ಮೇಲಿನ ಬಡ್ಡಿದರ ಮುಂದಿನ ತಿಂಗಳು ಅಂತಿಮವಾಗಲಿದೆ.

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಟ್ರಸ್ಟಿಗಳ ಕೇಂದ್ರೀಯ ಮಂಡಳಿ ಸಭೆ ಮಾರ್ಚ್ 4, 5 ರಂದು ಗುವಾಹಟಿಯಲ್ಲಿ ನಡೆಯಲಿದೆ. ಕಳೆದ ಸಾಲಿನಲ್ಲಿ ಶೇಕಡ 8.5 ರಷ್ಟು ಬಡ್ಡಿ ದರ ನೀಡಲಾಗಿತ್ತು.

EPFO ನ ಹಣಕಾಸು ಹೂಡಿಕೆ ಮತ್ತು ಲೆಕ್ಕಪರಿಶೋಧನೆ ಸಮಿತಿ ಇಂದು ನಡೆಯಲಿರುವ ಸಭೆಯಲ್ಲಿ EPFO ಗಳಿಕೆಯ ಬಗ್ಗೆ ಚರ್ಚೆ ನಡೆಸಲಿದೆ. ಪ್ರಸ್ತುತ ಇರುವ ಶೇಕಡ 8.5 ಬಡ್ಡಿದರ ಕಳೆದ 8 ವರ್ಷಗಳ ಅವಧಿಯಲ್ಲಿ ಕಡಿಮೆ ಮಟ್ಟದ ಬಡ್ಡಿ ದರವಾಗಿದೆ.

ಮುಂದಿನ ತಿಂಗಳು ನಡೆಯಲಿರುವ ಸಭೆಯಲ್ಲಿ ಪಿಎಫ್ ಬಡ್ಡಿ ದರವನ್ನು ಅಂತಿಮಗೊಳಿಸಲಾಗುವುದು. 2020 -21 ನೇ ಸಾಲಿನ ಬಡ್ಡಿದರವನ್ನು EPFO ಸದಸ್ಯರಿಗೆ ವಿತರಿಸಲಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...