ಬೆಂಗಳೂರು: ಆರ್ಥಿಕ ಚಟುವಟಿಕೆ ಚುರುಕುಗೊಳಿಸಲು ರಾಜ್ಯ ಸರ್ಕಾರ ಪ್ಲಾನ್ ಮಾಡಿಕೊಂಡಿದ್ದು, ರಪ್ತು ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ. ಶೇಕಡ 50 ರಷ್ಟು ಸಿಬ್ಬಂದಿಯೊಂದಿಗೆ ರಫ್ತು ಆಧಾರಿತ ಕೈಗಾರಿಕೆಗಳಿಗೆ ಕಾರ್ಯನಿರ್ವಹಿಸಲು ಸರ್ಕಾರ ಅವಕಾಶ ನೀಡಿದೆ.
ರಾಜ್ಯದಲ್ಲಿ ಸೋಂಕು ಕಡಿಮೆಯಾಗುತ್ತಿರುವುದರಿಂದ ಮತ್ತು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಲು ಲಾಕ್ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು, ರಫ್ತು ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.
ನಾಳೆಯಿಂದಲೇ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದ್ದು, ಶೇಕಡ 10 ರಷ್ಟು ಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಕೋವಿಡ್ ಟೆಸ್ಟ್ ಮಾಡಿಸಬೇಕು ಎಂದು ಸೂಚನೆ ನೀಡಲಾಗಿದೆ.