
ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಕೆಲವು ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ. ಯಾವ ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ ಎಂಬುದರ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ವೈದ್ಯಕೀಯ ಪರಿಕರಗಳನ್ನು ತಯಾರಿಸುವ ಕಾರ್ಖಾನೆಗಳು,ಔಷಧ ಮತ್ತು ಆಕ್ಸಿಜನ್ ಉತ್ಪಾದನಾ ಕಾರ್ಖಾನೆಗಳು, ಔಷಧ ಕಚ್ಚಾ ಸಾಮಗ್ರಿ ಉತ್ಪಾದಿಸುವ ಕಾರ್ಖಾನೆಗಳು, ಆಹಾರ ಉತ್ಪಾದನಾ ಕೈಗಾರಿಕೆ ಸೇರಿ ಕೆಲವು ಅವಶ್ಯ ಕೈಗಾರಿಕೆಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಸರ್ಕಾರಿ, ಖಾಸಗಿ ಕೈಗಾರಿಕೆಗಳಿಗೆ ಸರ್ಕಾರದಿಂದ ಅನುಮತಿ ನೀಡಿದ್ದು, ಈ ಅವಧಿಯಲ್ಲಿ ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕೈಗಾರಿಕೆ ಓಪನ್ ಮಾಡಬಹುದು ಎಂದು ಹೇಳಲಾಗಿದೆ.