ಬೆಂಗಳೂರು: ರೈತರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ತಂದಿದ್ದು, ರೈತರು ತಮಗೆ ಇಷ್ಟವಾದ ಕಡೆಯಲ್ಲಿ ಹೆಚ್ಚಿನ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದು ಎಂದು ಸರ್ಕಾರ ಹೇಳಿದೆ.
ಆದರೆ, ರೈತರಿಗೆ ಇದರಿಂದ ಪ್ರಯೋಜನವಾಗುತ್ತಿಲ್ಲ ಎಂದು ಹೇಳಲಾಗಿದೆ. ಬೆಂಬಲ ಬೆಲೆಗಿಂತ ಕಡಿಮೆ ಧಾರಣೆ ಇದ್ದು ಖರೀದಿ ಕೇಂದ್ರಗಳು ಇಲ್ಲದ ಕಾರಣ ರೈತರು ಕಡಿಮೆ ಬೆಲೆಗೆ ಮಾರುವ ಪರಿಸ್ಥಿತಿ ಎದುರಾಗಿದೆ.
ಸರ್ಕಾರ ಕಾಯ್ದೆ ಜಾರಿಗೊಳಿಸಿದ ನಂತರ ಕೃಷಿ ಉತ್ಪನ್ನಗಳಿಗೆ ಸರ್ಕಾರ ಘೋಷಿಸಿದ ಕನಿಷ್ಠ ಬೆಂಬಲ ಬೆಲೆ ಕೂಡ ಸಿಗದೆ ರೈತರು ಕಂಗಾಲಾಗಿದ್ದಾರೆ. ಎಪಿಎಂಸಿ ಹೊರಗೂ ರೈತರು ಹೆಚ್ಚಿನ ಬೆಲೆಗೆ ಕೃಷಿ ಉತ್ಪನ್ನ ಮಾರಾಟ ಮಾಡಬಹುದು ಎಂದು ಸರ್ಕಾರ ಹೇಳಿದೆ. ಆದರೆ, ಬಹುತೇಕ ಎಲ್ಲಾ ಕೃಷಿ ಉತ್ಪನ್ನಗಳ ಧಾರಣೆ ತೀವ್ರ ಕುಸಿತ ಕಂಡಿದ್ದು ಕನಿಷ್ಠ ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಇನ್ನು ಹಣಕಾಸಿನ ಕೊರತೆ ಕಾರಣ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿಲ್ಲ ಎಂದು ಹೇಳಲಾಗಿದೆ.