alex Certify ಬೆಳೆ ವಿಮೆ: ರೈತ ಸಮುದಾಯಕ್ಕೆ ಇಲ್ಲಿದೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳೆ ವಿಮೆ: ರೈತ ಸಮುದಾಯಕ್ಕೆ ಇಲ್ಲಿದೆ ಮತ್ತೊಂದು ಗುಡ್ ನ್ಯೂಸ್

ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಹವಾಮಾನಾಧಾರಿತ ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕವನ್ನು ಕೃಷಿಕರ ಹಿತದೃಷ್ಟಿಯಿಂದ ಜುಲೈ 31 ರವರೆಗೆ ವಿಸ್ತರಿಸಲು ಕೋರಲಾಗಿದ್ದು, ಸರ್ಕಾರವು ಅವಧಿ ವಿಸ್ತರಿಸುವ ಭರವಸೆ ನೀಡಿದೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ.

ಅಡಿಕೆ, ಶುಂಠಿ ಹಾಗೂ ಕಾಳುಮೆಣಸು ಮುಂತಾದ ತೋಟಗಾರಿಕಾ ಬೆಳೆಗಳಿಗೆ ಹವಾಮಾನ ಆಧಾರಿತ ವಿಮೆ ಮಾಡಿಸಲು ಜೂನ್ 30 ರವರೆಗೆ ಹಾಗೂ ಮಾವು ಬೆಳೆಗೆ ಜುಲೈ 31 ರವರೆಗೆ ನೋಂದಾಯಿಸಿಕೊಳ್ಳಲು ದಿನಾಂಕ ನಿಗದಿಪಡಿಸಿ ಸರ್ಕಾರವು ಜೂನ್ 25 ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ, ಅವಧಿ ವಿಸ್ತರಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಮಾಡಿದ ಕೋರಿಕೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪರಿಷ್ಕೃತ ಆದೇಶ ಶೀಘ್ರದಲ್ಲಿ  ಹೊರಬೀಳಲಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ಎರಡು ದಿನಗಳ ಅತ್ಯಂತ ಕಡಿಮೆ ಕಾಲಾವಾಕಾಶ ಇರುವುದರಿಂದ ಹಾಗೂ ಮಲೆನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಸಾಕಷ್ಟು ಸಂಖ್ಯೆಯ ರೈತರಿಗೆ ಹೆಸರು ನೋಂದಾಯಿಸಲು ಸಾಧ್ಯವಾಗುವುದಿಲ್ಲ. ಈ ಸಂಬಂಧ ರೈತರ ಅನಾನುಕೂಲಗಳನ್ನು ಮುಖ್ಯಮಂತ್ರಿಗಳು ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.

ಆದ್ದರಿಂದ ಮಾವು ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗದೆ ನಿಗದಿಪಡಿಸಲಾಗುವ ದಿನಾಂಕದೊಳಗಾಗಿ ಬೆಳೆ ವಿಮಾ ಕಂತು ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಅರ್ಹ ರೈತರು ಈ ಸದವಕಾಶದ  ಲಾಭ ಪಡೆದುಕೊಳ್ಳುವಂತೆ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...