
ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿ ರೈತರಿಗೆ ಇ –ಕೆವೈಸಿ ಮಾಡಿಸಲು ನೀಡಿದ್ದ ಗಡುವನ್ನು ಮೇ 22ರ ವರೆಗೆ ವಿಸ್ತರಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾ. 31 ರವರೆಗೆ ನೀಡಲಾಗಿದ್ದ ಗಡುವನ್ನು ಮೇ 22 ರವರೆಗೆ ವಿಸ್ತರಿಸಲಾಗಿದೆ. ರೈತರು ನೋಂದಣಿ ಮಾಡಿಸಲು ವೆಬ್ ಸೈಟ್ ನಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದರಿಂದ ಗಡುವು ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.