ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಮೇ 31 ಕೊನೆಯ ದಿನವಾಗಿದೆ.
ಈ ಯೋಜನೆಯಡಿ 4 ತಿಂಗಳಿಗೊಮ್ಮೆ ತಲಾ 2 ಸಾವಿರ ರೂಪಾಯಿಯಂತೆ ವಾರ್ಷಿಕ 6000 ರೂ.ಗಳನ್ನು ಫಲಾನುಭವಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದ ರೈತರಿಗೆ ಮುಂದಿನ ಕಂತುಗಳನ್ನು ನಿಲ್ಲಿಸುವ ಸಾಧ್ಯತೆ ಇದೆ.
ಇ-ಕೆವೈಸಿ ಪೂರ್ಣಗೊಳಿಸದ ರೈತರು http:pmkisan.gov.in ವೆಬ್ಸೈಟ್ ಅಥವಾ ಮೊಬೈಲ್ ಮೂಲಕ ಇ -ಕೆವೈಸಿ ಅಪ್ಡೇಟ್ ಪೂರ್ಣಗೊಳಿಸಬಹುದಾಗಿದೆ. ಇದಲ್ಲದೆ, ಗ್ರಾಮ ಒನ್ ಸೇವಾ ಕೇಂದ್ರಗಳು ಅಥವಾ ಸೈಬರ್ ಸೆಂಟರ್ ಗಳಲ್ಲಿಯೂ ರೈತರು ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಮೇ 22ರ ವರೆಗೆ ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಅವಕಾಶವನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.