ಬೆಂಗಳೂರು: ಕೊರೋನಾ ಸಂಕಷ್ಟ ತಂದೊಡ್ಡಿದ್ದರಿಂದ ಉದ್ಯೋಗ ಕಳೆದುಕೊಂಡ ಬಹುತೇಕರು ಗ್ರಾಮಾಂತರ ಪ್ರದೇಶದಲ್ಲಿ ಉಳಿದುಕೊಂಡಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ಉದ್ಯೋಗ ಹೆಚ್ಚಿಸಲು ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ 1072 ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಿದ್ದು ಉದ್ಯಮ ಸ್ಥಾಪನೆಗೆ ಅವಕಾಶ ನೀಡುವ ಜೊತೆಗೆ ಉದ್ಯೋಗಾವಕಾಶ ಹೆಚ್ಚಳ, ರೈತರ ಹಿತ ಕಾಯಲು ಆದ್ಯತೆ ನೀಡಲಾಗಿದೆ.
ಕೇಂದ್ರ ಸರ್ಕಾರದ ಅತ್ಮನಿರ್ಭರ್ ಭಾರತ್ ಯೋಜನೆಯಡಿ ಹೆಚ್ಚಿನ ಅನುದಾನ ಪಡೆದು ಕೃಷಿಕರಿಗೆ ಅನುಕೂಲವಾಗುವ ಸಂಸ್ಕರಣಾ ಕ್ಷೇತ್ರದ ಹೆಚ್ಚಿನ ಘಟಕಗಳನ್ನು ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆರಂಭಿಸಿ ಉದ್ಯೋಗಾವಕಾಶ ಹೆಚ್ಚಿಸಲಾಗುವುದು.
ಆಯಾ ಪ್ರದೇಶಗಳಿಗೆ ಅನುಗುಣವಾಗಿ ಕಾಫಿ, ಸಾಂಬಾರ, ಮೆಕ್ಕೆಜೋಳ, ಶೇಂಗಾ ಬಿವರೇಜಸ್ ಕ್ಲಸ್ಟರ್ ಗಳನ್ನು ಆರಂಭಿಸಲಾಗುವುದು. ಆಹಾರ ಸಂಸ್ಕರಣೆ ಮೂಲಕ ಮೌಲ್ಯವರ್ಧನೆ ಮಾಡಿದರೆ ಬೆಳೆಗಳಿಗೆ ಮಾರುಕಟ್ಟೆ ಸಿಗುತ್ತದೆ. ರೈತರಿಗೆ ಅನುಕೂಲವಾಗುತ್ತದೆ.
ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಅಗ್ರಿ ಪಾರ್ಕ್, ರೈಸ್ ಟೆಕ್ನಾಲಜಿ ಪಾರ್ಕ್, ಶೀತಲೀಕರಣ ಘಟಕ, ಗೋದಾಮು, ಸೀಫುಡ್ ಪಾರ್ಕ್, ಫುಡ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎನ್ನಲಾಗಿದೆ.