
ಬೆಂಗಳೂರು: ರೈತರಿಗೆ ಸಾಲದಲ್ಲಿ ಬಡ್ಡಿ ರಿಯಾಯಿತಿ ನೀಡುವ ಬಗ್ಗೆ ಡಿಸಿಸಿ ಬ್ಯಾಂಕ್ ಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಪಹಣಿ ನೀಡಿದರೆ ರೈತರು ಚಿನ್ನಾಭರಣ ಅಡವಿಟ್ಟು ಪಡೆದ ಸಾಲದ ಬಡ್ಡಿಯಲ್ಲಿ ರಿಯಾಯಿತಿ ನೀಡುವ ಕುರಿತಂತೆ ಡಿಸಿಸಿ ಬ್ಯಾಂಕುಗಳ ಜೊತೆ ಶೀಘ್ರದಲ್ಲೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಕೆಲವು ಬ್ಯಾಂಕುಗಳಲ್ಲಿ ಚಿನ್ನಾಭರಣ ಸಾಲ ಪಡೆದುಕೊಂಡರೆ ರೈತರು ಪಹಣಿ ನೀಡಿದರೆ ನಿಗದಿಗಿಂತ ಹೆಚ್ಚಿನ ಬಡ್ಡಿ ರಿಯಾಯಿತಿ ನೀಡಲಾಗುತ್ತಿದೆ. ಇತರ ಡಿಸಿಸಿ ಬ್ಯಾಂಕುಗಳಲ್ಲಿಯೂ ಈ ಸೌಲಭ್ಯ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ