ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಹಲವು ಕೊಡುಗೆ ನೀಡಲಾಗಿದೆ.
ರೈತರ ಸಾಲ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಶೇಕಡ 3ರ ಬಡ್ಡಿ ದರದಲ್ಲಿ ನೀಡುತ್ತಿದ್ದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ 35 ಲಕ್ಷಕ್ಕೂ ಅಧಿಕ ರೈತರಿಗೆ 25,000 ಕೋಟಿ ರೂ.ಸಾಲ ವಿತರಿಸುವ ಗುರಿ ಹೊಂದಲಾಗಿದೆ.