![](https://kannadadunia.com/wp-content/uploads/2022/10/basavarajbommai-2-1658323980-1658389959.jpg)
ಬೆಂಗಳೂರು: ಇಂದು ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಲಬುರ್ಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ನಡೆಯುವ ಸಮಾರಂಭದಲ್ಲಿ 50,000ಕ್ಕೂ ಅಧಿಕ ಮಂದಿ ಭಾಗಿಯಾಗುವರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದು, ಇಂದು 10 ಸಾವಿರ ರೈತರಿಗೆ ಸಾಲ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು. 200 ಕೋಟಿ ರೂಪಾಯಿ ಸಾಲ ವಿತರಣೆ ಕಾರ್ಯಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ 50,000ಕ್ಕೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆ ಇದೆ.