alex Certify BIG NEWS: ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಚಿಂತನೆ

ಮೈಸೂರು: ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆದಿದೆ. ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಮತ್ತು ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ ಈ ಬಗ್ಗೆ ಮಾಹಿತಿ ನೀಡಿದ್ದು. ಕೊರೋನಾದಿಂದ ಮೃತಪಟ್ಟ ರೈತರ ಮೇಲಿನ ಸಾಲದಲ್ಲಿ ಒಂದು ಲಕ್ಷ ರೂಪಾಯಿವರೆಗೆ ಮನ್ನಾ ಮಾಡಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಕಾರಣದಿಂದಾಗಿ ಸಾಕಷ್ಟು ಜನ ತೊಂದರೆಗೀಡಾಗಿದ್ದಾರೆ. ಅದೇ ರೀತಿ ರೈತರು ಕೂಡ ತೊಂದರೆ ಅನುಭವಿಸುತ್ತಿದ್ದಾರೆ. ಅನೇಕ ರೈತರು ಕೊರೋನಾದಿಂದ ಮೃತಪಟ್ಟಿದ್ದು, ಸಂಕಷ್ಟದಲ್ಲಿರುವವರ ಕುಟುಂಬಕ್ಕೆ ನೆರವಾಗಲು ಕೃಷಿ ಸಾಲದಲ್ಲಿ 1 ಲಕ್ಷ ರೂಪಾಯಿವರೆಗೆ ಮನ್ನಾ ಮಾಡಲು ಅಪೆಕ್ಸ್ ಬ್ಯಾಂಕ್ ಸಭೆಯಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...