ಬೆಂಗಳೂರು: ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಅನುಕೂಲವಾಗುವಂತೆ ಗೋದಾಮು ವಿನಾಯಿತಿ ಸೌಲಭ್ಯ ಕಲ್ಪಿಸಲಾಗುವುದು. ಕೃಷಿ ಉತ್ಪನ್ನಗಳ ಬೆಲೆ ಕುಸಿತದ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳನ್ನು ಸಂಗ್ರಹಿಸಿಡಲು ಅನುಕೂಲವಾಗುವಂತೆ ರೈತರಿಗೆ ಗೋದಾಮು ವಿನಾಯಿತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯ ಉಗ್ರಾಣ ನಿಗಮ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಇತರೆ ಸಹಕಾರ ಸಂಸ್ಥೆಗಳ ಗೋದಾಮುಗಳಲ್ಲಿ ರೈತರು ಪಾವತಿಸುವ ಶುಲ್ಕದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇಕಡ 25 ರಷ್ಟು ಮತ್ತು ಪರಿಶಿಷ್ಟ ಜಾತಿ, ಪಂಗಡದವರಿಗೆ ಶೇಕಡ 50 ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಕೃಷಿ ಉತ್ಪನ್ನಗಳನ್ನು ಸಂಗ್ರಹಿಸಿದ ದಾಸ್ತಾನಿಗೆ ಗರಿಷ್ಠ 9 ತಿಂಗಳ ಅವಧಿಗೆ ಅಥವಾ ರೈತರು ಕೃಷಿ ಉತ್ಪನ್ನಗಳನ್ನು ಗೋದಾಮುಗಳಿಂದ ತೆಗೆದುಕೊಳ್ಳುವ ಅವಧಿಯಲ್ಲಿ ಯಾವುದು ಮೊದಲೋ ಆ ಅವಧಿಗೆ ರೈತರು ಪಾವತಿಸಬೇಕಾಗಿರುವ ಸಂಗ್ರಹ ಶುಲ್ಕದಲ್ಲಿ ವಿನಾಯಿತಿ ಮೊತ್ತವನ್ನು ರಾಜ್ಯ ಸರ್ಕಾರ ನೀಡಲಿದೆ. ಇದರೊಂದಿಗೆ ರೈತರಿಗೆ ಅನುಕೂಲವಾಗುವಂತೆ ಅಡಮಾನ ಸಾಲ ಸೌಲಭ್ಯ ಕೂಡ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿದೆ.