alex Certify ರೈತ ಸಮುದಾಯಕ್ಕೆ ಇಲ್ಲಿದೆ ಮತ್ತೊಂದು ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಇಲ್ಲಿದೆ ಮತ್ತೊಂದು ʼಗುಡ್ ನ್ಯೂಸ್ʼ

ಶಿವಮೊಗ್ಗ: ರೈತರು ನಿಗಧಿಪಡಿಸಿದ ದಿನಾಂಕದೊಳಗಾಗಿ ಸುಸ್ತಿ ಇರುವ ಮಧ್ಯಮಾವಧಿ ಸಾಲದ ಸುಸ್ತಿ ಅಸಲನ್ನು ಮರುಪಾವತಿಸಿ, ಬಡ್ಡಿ ಮನ್ನಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖೆಗಳ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಸಾಲ ಪಡೆದು 2020ರ ಜನವರಿ ಮಾಸಾಂತ್ಯಕ್ಕೆ ಸುಸ್ತಿಯಾಗುವ ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು 2020ರ ಮಾರ್ಚ್ 31ರೊಳಗಾಗಿ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ, ಬ್ಯಾಂಕುಗಳಿಗೆ ಪೂರ್ತಿಯಾಗಿ ಪಾವತಿಸಿದಲ್ಲಿ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡುವಂತೆ ಈ ಹಿಂದೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಆದರೆ, ದೇಶದಲ್ಲಿ ಕೊರೋನ ವೈರಸ್ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ರೈತ ಪರವಾದ ಈ ಯೋಜನೆಯನ್ನು 2020ರ ಜೂನ್ 30ರವರೆಗೆ ವಿಸ್ತರಿಸಲಾಗಿದ್ದು, ಸದರಿ ಯೋಜನೆಯ ಕೊನೆಯ ಅವಕಾಶವನ್ನು ರೈತ ಸದಸ್ಯರು ಉಪಯೋಗಿಸಿಕೊಂಡು ನಿಗಧಿಪಡಿಸಲಾದ ದಿನಾಂಕದೊಳಗಾಗಿ ಸುಸ್ತಿ ಇರುವ ಮಧ್ಯಮಾವಧಿ ಸಾಲದ ಸುಸ್ತಿ ಅಸಲನ್ನು ಮರುಪಾವತಿಸಿ, ಬಡ್ಡಿ ಮನ್ನಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...