ಬೆಂಗಳೂರು: ರೈತರಿಗೆ ಶೇಕಡ 125 ರಷ್ಟು ಕೃಷಿ ಸಾಲ ವಿತರಿಸುವ ಗುರಿ ಹೊಂದಿರುವುದಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಕಳೆದ ಬಾರಿ ಶೇಕಡ 115 ರಷ್ಟು ಗುರಿ ಮೀರಿದ ಸಾಧನೆ ಮಾಡಿದ್ದೆವು. ಈ ವರ್ಷ ಇನ್ನಷ್ಟು ಹೆಚ್ಚಳ ಮಾಡಲಾಗಿದೆ. ಸಾಧನೆ ಮೀರಿ ಶೇಕಡ 125 ರಷ್ಟು ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
12,35,033 ರೈತರಿಗೆ 9,136.89 ಕೋಟಿ ಸಾಲ ನೀಡಲಾಗಿದ್ದು, ಶೇಕಡ 72.96 ರಷ್ಟು ಗುರಿ ಸಾಧಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ವಿತರಣೆಯಲ್ಲಿ ಗಮನಾರ್ಹ ಸಾಧನೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಈ ಬಾರಿಯ ಗುರಿ ಮೀರಿದ ಕೃಷಿ ಸಾಲ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಸಮಸ್ಯೆಗಳನ್ನು ಆಲಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಕ್ರಮಕೈಗೊಳ್ಳಲಾಗಿದೆ. ಡಿಸಿಸಿ ಬ್ಯಾಂಕುಗಳ ಸಭೆಯನ್ನು ಕರೆಯಲಾಗಿದೆ. ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ನೀಡಲಾಗುವುದು. ಕೃಷಿ ಕಾರ್ಯಗಳಿಗೆ ತೊಂದರೆಯಾಗದಂತೆ ಸಾಲ ನೀಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.