ನವದೆಹಲಿ: ಮುಂಗಾರು ಆರಂಭದ ಸಂದರ್ಭದಲ್ಲಿ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲಾಗಿದೆ.
ಬೆಂಬಲ ಬೆಲೆ ಪದ್ಧತಿ ರದ್ದಾಗಲಿದೆ ಎನ್ನುವ ಆತಂಕ ದೂರ ಮಾಡಿರುವ ಕೇಂದ್ರ ಸರ್ಕಾರ, ಬೆಳೆಗಳಿಗೆ ಬೆಂಬಲ ಬೆಲೆ ಏರಿಕೆ ಮಾಡಿದೆ. ಭತ್ತ, ರಾಗಿ, ಜೋಳ ಸೇರಿದಂತೆ 12 ಖಾರಿಫ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ. ಭತ್ತದ ಬೆಂಬಲ ಬೆಲೆಯನ್ನು ಕ್ವಿಂಟಲ್ ಗೆ 72 ರೂಪಾಯಿ ಹೆಚ್ಚಳ ಮಾಡಲಾಗಿದೆ. ರಾಗಿ ಕ್ವಿಂಟಲ್ ಗೆ 82 ರೂಪಾಯಿ ಹಾಗೂ ತೊಗರಿ ಮತ್ತು ಉದ್ದಿನಬೇಳೆಗೆ ಕ್ವಿಂಟಲ್ ಗೆ 300 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಬೆಂಬಲ ಬೆಲೆ ಪದ್ಧತಿ ರದ್ದು ಮಾಡುವ ಪ್ರಶ್ನೆಯೇ ಇಲ್ಲ. ಅದು ಮುಂದುವರೆಯಲಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.