ವಾರಣಾಸಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ದೇಶದ ರೈತರು ಪ್ರತಿಭಟನೆ ಕೈಗೊಂಡಿರುವ ಸಂದರ್ಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಅಭಯ ನೀಡಿದ್ದಾರೆ.
ಕೃಷಿ ಮಂಡಿಯನ್ನು ರದ್ದು ಮಾಡಿಲ್ಲ, ಬೆಂಬಲ ಬೆಲೆಯನ್ನು ನಿಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರೈತರು ಎಪಿಎಂಸಿಗಳಲ್ಲಿ ಈಗಲೂ ತಮ್ಮ ಕೃಷಿ ಉತ್ಪನ್ನ ಮಾರಾಟ ಮಾಡಬಹುದು. ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರದ್ದು ಮಾಡಿಲ್ಲವೆಂದು ಹೇಳಿದ್ದಾರೆ.
ಹೊಸ ಮುಕ್ತ ಮಾರುಕಟ್ಟೆ ವ್ಯವಸ್ಥೆ ಜಾರಿಗೆ ಬಂದಿದ್ದರೂ ಸಾಂಪ್ರದಾಯಕ ಮಂಡಿಗಳು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಸ್ಥಗಿತಗೊಳಿಸಿಲ್ಲ. ರೈತರಿಗಾಗಿ ಹೊಸ ಅವಕಾಶಗಳನ್ನು ಕೃಷಿ ಕಾಯ್ದೆಗಳು ನೀಡಿವೆ. ರೈತರಿಗೆ ಸುಳ್ಳು ಮಾಹಿತಿ ನೀಡಿ ಕೆಲವರು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.