alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: 11,750 ರೂ. ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 11,750 ರೂ. ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಗೆ ಆದೇಶ

ಬೆಂಗಳೂರು: ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮಾರ್ಗಸೂಚಿಗಳನ್ವಯ 7 ಜಿಲ್ಲೆಗಳಲ್ಲಿ ಉಂಡೆ ಕೊಬ್ಬರಿ ಖರೀದಿಗೆ ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ.

ತುಮಕೂರು, ಹಾಸನ, ಚಿಕ್ಕಮಗಳೂರು ಮೊದಲಾದ 7 ಜಿಲ್ಲೆಗಳ ರೈತರಿಂದ ಉಂಡೆ ಕೊಬ್ಬರಿ ಖರೀದಿಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ. ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಕ್ವಿಂಟಲ್ ಗೆ 11,750 ರೂ. ಬೆಂಬಲ ಬೆಲೆ ನಿಗದಿಪಡಿಸಿದ್ದು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ತುಮಕೂರು ಜಿಲ್ಲೆಗಳ ರೈತರಿಂದ ಗರಿಷ್ಠ 54,750 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಸಲು ಅನುಮತಿ ನೀಡಲಾಗಿದೆ.

ನಾಫೆಡ್, ರಾಜ್ಯ ಸರ್ಕಾರ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ, ಖರೀದಿ ಅವಧಿ 6 ತಿಂಗಳವರೆಗೆ ನಿಗದಿಪಡಿಸಲಾಗಿದೆ. ನೋಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಸೂಚಿಸಲಾಗಿದ್ದು, ಪ್ರತಿ ಎಕರೆಗೆ ಗರಿಷ್ಠ 6 ಕ್ವಿಂಟಲ್ ಮತ್ತು ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಉಂಡೆ ಕೊಬ್ಬರಿ ಖರೀದಿಸಲು ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...